ಯುಪಿಎಸ್‌ಸಿ 71 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು
ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಸಲು ಮೇ 17, 2018 ಕೊನೆಯ ದಿನವಾಗಿದೆ.
ಕೇಂದ್ರ ಲೋಕಸೇವಾ ಆಯೋಗ
71 ವಿವಿಧ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. 28 ಮಾರ್ಕೆಟಿಂಗ್ ಆಫೀಸರ್, 24 ಉಪನ್ಯಾಸಕ (ಎಲೆಕ್ಟ್ರಾನಿಕ್ಸ್
ಅಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್) ಸೇರಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ಮಾರ್ಕೆಟಿಂಗ್
ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗ್ರಿಕಲ್ಚರ್, ಸಸ್ಯಶಾಸ್ತ್ರ, ಅಗ್ರಿಕಲ್ಚರ್
ಎಕಾನಾಮಿಕ್ಸ್, ಅಗ್ರಿಕಲ್ಚರ್ ಮಾರ್ಕೆಟಿಂಗ್‌ನಲ್ಲಿ ಮಾನ್ಯತೆ ಪಡೆದ ಪದವಿ ವಿಶ್ವವಿದ್ಯಾಲಯದಿಂದ ಪದವಿ
ಪಡೆದಿರಬೇಕು.
ಉಪನ್ಯಾಸಕ ಹುದ್ದೆಗೆ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬ್ಯಾಚುಲರ್ ಡಿಗ್ರಿ ಇನ್ ಇಂಜಿನಿರಿಂಗ್/ ಟೆಕ್ನಾಲಜಿ ಇನ್ ಕೆಮಿಕಲ್
ಇಂಜಿನಿಯರಿಂಗ್ ಅನ್ನು ಮಾನ್ಯತೆ ಪಡೆದ ವಿವಿಯಿಂದ ಮೊದಲ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು.
ಮಾರ್ಕೆಟಿಂಗ್
ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 30 ವರ್ಷ, ಉಪನ್ಯಾಸಕ ಹುದ್ದೆಗೆ ಅರ್ಜಿ ಸಲ್ಲಿಸುವ
ಅಭ್ಯರ್ಥಿಗಳಿಗೆ 35 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಬಿಐ
ಬ್ಯಾಂಕ್‌ನ ಯಾವುದೇ ಶಾಖೆಯಲ್ಲಿ ಅರ್ಜಿ ಶುಲ್ಕವನ್ನು ನಗದು ರೂಪದಲ್ಲಿ ಪಾವತಿ ಮಾಡಬಹುದಾಗಿದೆ. ಎಸ್‌ಸಿ/ಎಸ್‌ಟಿ/ಅಂಗವಿಕಲ/ಮಹಿಳಾ
ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ವಿರುವುದಿಲ್ಲ. ಉಳಿದ ವರ್ಗದ ಅಭ್ಯರ್ಥಿಗಳಿಗೆ 25 ರೂ. ಶುಲ್ಕ ನಿಗದಿಗೊಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
No comments:
Post a Comment